Obadiah 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಜನರ ನಗರದ ಬಾಗಿಲನ್ನು ನೀನು ಪ್ರವೇಶಿಸಿ ಅವರ ತೊಂದರೆಗಳನ್ನು ನೋಡಿ ನೀನು ಹಾಸ್ಯ ಮಾಡಿದೆ. ನೀನು ಹಾಗೆ ಮಾಡಬಾರದಾಗಿತ್ತು. ಅವರು ಸಂಕಟಪಡುತ್ತಿರುವಾಗ ನೀನು ಅವರ ಐಶ್ವರ್ಯವನ್ನು ಸೂರೆಮಾಡಿದೆ. ನೀನು ಹಾಗೆ ಮಾಡಬಾರದಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಜನರ ವಿಪತ್ಕಾಲದಲ್ಲಿ ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಾಗಿತ್ತು, ಅವರ ವಿಪತ್ಕಾಲದಲ್ಲಿ ಅವರ ಕೇಡಿಗೆ ನಿನ್ನಂಥವನ ಕಣ್ಣು ಅರಳಬಾರದಾಗಿತ್ತು. ಅವರ ವಿಪತ್ಕಾಲದಲ್ಲಿ ಅವರ ಆಸ್ತಿಯ ಮೇಲೆ ನೀನು ಕೈಹಾಕಬಾರದಾಗಿತ್ತು.
Kannada BSI Bible 2016
ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು;
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜನರ ವಿಪತ್ಕಾಲದಲ್ಲಿ ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಾಗಿತ್ತು; ಅವರ ವಿಪತ್ಕಾಲದಲ್ಲಿ ಅವರ ಕೇಡಿಗೆ ನಿನ್ನಂಥವನ ಕಣ್ಣು ಅರಳಬಾರದಾಗಿತ್ತು; ಅವರ ವಿಪತ್ಕಾಲದಲ್ಲಿ ಅವರ ಸೊತ್ತಿಗೆ ನೀನು ಕೈಹಾಕಬಾರದಾಗಿತ್ತು;
Kannada Bible (KNCL) BSI 2016
ನನ್ನ ಜನರ ಆಪತ್ಕಾಲದಲ್ಲಿ ನೀನು ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಿತ್ತು. ಅವರ ಸೊತ್ತಿಗೆ ನೀನು ಕೈಹಾಕಬಾರದಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಜನರ ಆಪತ್ತಿನ ದಿವಸದಲ್ಲಿ ಅವರ ದ್ವಾರಗಳ ಮೂಲಕ ಪ್ರವೇಶಿಸಬಾರದಿತ್ತು. ಹೌದು, ನೀನು ಅವರ ಆಪತ್ತಿನ ದಿವಸದಲ್ಲಿ ಅವರನ್ನು ಕೀಳು ದೃಷ್ಟಿಯಿಂದ ನೋಡಬಾರದಾಗಿತ್ತು. ಅವರ ಆಪತ್ತಿನ ದಿವಸದಲ್ಲಿ ಅವರ ಆಸ್ತಿಯ ಮೇಲೆ ಕೈ ಹಾಕಬಾರದಾಗಿತ್ತು.