Obadiah 1:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲಾ ಜನಾಂಗಗಳವರಿಗೆ ಯೆಹೋವನ ದಿನವು ಬೇಗನೇ ಬರುವದು. ನೀನು ಬೇರೆಯವರಿಗೆ ಮಾಡಿದ ದುಷ್ಕೃತ್ಯಗಳನ್ನು ಅವರು ನಿನ್ನ ಮೇಲೆಯೇ ನಡೆಸುವರು. ಅದೇ ದುಷ್ಕೃತ್ಯಗಳು ನಿನ್ನ ತಲೆ ಮೇಲೆ ಬೀಳುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ. ಎದೋಮೇ, ನೀನು ಮಾಡಿದ್ದೇ ನಿನಗಾಗುವುದು. ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವುದು.
Kannada BSI Bible 2016
ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ; ನೀನು ಮಾಡಿದ್ದೇ ನಿನಗಾಗುವದು; ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವದು.
Kannada Bible (KNCL) BSI 2016
“ಸಮಸ್ತ ರಾಷ್ಟ್ರಗಳಿಗೂ ಸರ್ವೇಶ್ವರನ ದಿನ ಸಮೀಪಿಸಿದೆ. ನೀನು ಮಾಡಿದ್ದನ್ನೆ ನಿನಗೂ ಮಾಡಲಾಗುವುದು. ನಿನ್ನ ದುಷ್ಕೃತ್ಯವು ನಿನ್ನ ತಲೆಗೇ ಬರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರ ದಿವಸವು ಎಲ್ಲಾ ಜನಾಂಗಗಳ ಮೇಲೆ ಸಮೀಪವಾಗಿದೆ. ನೀನು ಮಾಡಿದ ಹಾಗೆಯೇ ನಿನಗೂ ಮಾಡಲಾಗುವುದು. ನಿನ್ನ ಕಾರ್ಯಗಳು ನಿನ್ನ ತಲೆಯ ಮೇಲೆ ತಿರುಗುವುವು.