Obadiah 1:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ನನ್ನ ಪರಿಶುದ್ಧ ಪರ್ವತದಲ್ಲಿ ರಕ್ತವನ್ನು ಸುರಿಸಿದೆ. ನೀನು ಹುಟ್ಟಲೇ ಇಲ್ಲ ಎಂಬುದಾಗಿ ಅನಿಸುವದು. ಆದ್ದರಿಂದ ಇತರ ಜನಾಂಗಗಳು ನಿನ್ನ ರಕ್ತವನ್ನು ಸುರಿಸುತ್ತವೆ. ನೀನು ಕೊನೆಗೊಳ್ಳುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಜನರೇ, ನೀವು ನನ್ನ ಪವಿತ್ರಪರ್ವತದಲ್ಲಿ ನನ್ನ ದಂಡನೆಯ ಕಹಿ ಪಾನಮಾಡಿದ್ದಿರಿ. ನಿಮ್ಮ ಸುತ್ತಲಿರುವ ಸಕಲ ಜನಾಂಗಗಳೂ ಹೀಗೆ ನಿತ್ಯವಾಗಿ ಪಾನಮಾಡುವವು. ಹೌದು ಆ ರಾಜ್ಯಗಳು ಹೀಗೆ ಕುಡಿದು ಕಬಳಿಸಿ ಅಸ್ತಿತ್ವದಲ್ಲಿ ಇಲ್ಲದಂತೆ ಆಗುವವು.
Kannada BSI Bible 2016
ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವವು; ಹೌದು, ಕುಡಿದು ನುಂಗಿಬಿಡುವವು; ಇಲ್ಲದೆ ಇದ್ದವರ ಹಾಗೆಯೇ ಇರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
[ನನ್ನ ಜನರೇ,] ನೀವು ನನ್ನ ಪವಿತ್ರ ಪರ್ವತದಲ್ಲಿ [ವಿಪತ್ಪಾನಕವನ್ನು] ಪಾನಮಾಡಿದಂತೆಯೇ ಸಕಲ ಜನಾಂಗಗಳೂ ನಿತ್ಯವಾಗಿ ಪಾನಮಾಡುವವು; ಹೌದು, ಕುಡಿದು ನುಂಗಿಬಿಟ್ಟು ಇಲ್ಲದ ಹಾಗಾಗುವವು.
Kannada Bible (KNCL) BSI 2016
ಜನರೇ, ಪವಿತ್ರಪರ್ವತದ ಮೇಲೆ ನನ್ನ ದಂಡನೆಯ ಕಹಿಪಾನಮಾಡಿದಿರಿ. ಅಂತೆಯೇ ಸಕಲ ರಾಷ್ಟ್ರಗಳೂ ಕಹಿಪಾನ ಮಾಡುವುವು. ಹೌದು, ಪದೇಪದೇ ಪಾನಮಾಡಿ ತೂರಾಡುವುವು. ಅಂತ್ಯದಲ್ಲಿ ಇಲ್ಲದಂತಾಗುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ, ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವುವು. ಹೌದು, ಕುಡಿದು ಎಂದೂ ಇಲ್ಲದವರ ಹಾಗೆ ಆಗುವುದು.