Obadiah 1:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಚೀಯೋನ್ ಬೆಟ್ಟದಲ್ಲಿ ಅಳಿದುಳಿದವರು ಇರುವರು. ಅವರು ನನ್ನ ವಿಶೇಷ ಜನರಾಗಿರುವರು. ಯಾಕೋಬನ ಜನರು ತಮಗೆ ಸೇರಿರುವದನ್ನು ಹಿಂದಕ್ಕೆ ಪಡೆದುಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು.
Kannada BSI Bible 2016
ಆದರೆ ಚೀಯೋನ್‌ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು; ಆ ಪರ್ವತವು ಮೀಸಲಾಗಿರುವದು; ಯಾಕೋಬನ ವಂಶದವರು ತಮ್ಮ ಸ್ವಾಸ್ತ್ಯಗಳನ್ನು ಅನುಭವಿಸುವರು.
Kannada Bible (KNCL) BSI 2016
“ಆದರೆ ತಪ್ಪಿಸಿಕೊಂಡವರು ಸಿಯೋನ್ ಪರ್ವತದ ಮೇಲೆ ಇರುವರು. ಅದು ಪುಣ್ಯಕ್ಷೇತ್ರ ಎನಿಸಿಕೊಳ್ಳುವುದು; ಯಕೋಬನ ವಂಶಜರು ತಮ್ಮ ಸ್ವತ್ತನ್ನು ಮರಳಿ ಅನುಭವಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವುದು. ಅದು ಪರಿಶುದ್ಧವಾಗಿರುವುದು. ಯಾಕೋಬನ ಮನೆತನದವರು ತಮ್ಮ ಸೊತ್ತನ್ನು ಮರಳಿ ಅನುಭವಿಸುವರು.