Obadiah 1:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನ ಸಂತತಿಯವರು ಬೆಂಕಿಯಂತಿರುವರು. ಯೋಸೇಫನ ಜನಾಂಗವು ಬೆಂಕಿಯ ನಾಲಗೆಗಳಂತೆ ಇರುವರು. ಆದರೆ ಏಸಾವಿನ ಜನಾಂಗ ಸುಟ್ಟ ಬೂದಿಯಂತಿರುವರು. ಯೆಹೂದದ ಜನರು ಎದೋಮನನ್ನು ಸುಟ್ಟುಹಾಕುವರು. ಯೆಹೂದದ ಜನರು ಎದೋಮನನ್ನು ನಾಶಮಾಡುವರು. ಆಗ ಏಸಾವಿನ ಜನರಲ್ಲಿ ಯಾರೂ ಉಳಿಯುವದಿಲ್ಲ.” ಯಾಕೆಂದರೆ ಇದು ದೇವರಾದ ಯೆಹೋವನ ಮಾತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನವಂಶ ಅಗ್ನಿಯಾಗಿಯೂ, ಯೋಸೇಫನ ವಂಶ ಜ್ವಾಲೆಯಾಗಿಯೂ, ಇವೆರಡೂ ಸೇರಿ ಕೊಳೆಯಂತೆ ಇರುವ ಏಸಾವನ ವಂಶವನ್ನು ಧಗಧಗನೆ ದಹಿಸಿ ಭಸ್ಮ ಮಾಡುವವು. ಏಸಾವನ ವಂಶದವರಲ್ಲಿ ಯಾರೂ ಉಳಿಯರು, ಇದು ಯೆಹೋವನೇ ನುಡಿದಿದ್ದಾನೆ.
Kannada BSI Bible 2016
ಇದಲ್ಲದೆ ಯಾಕೋಬಿನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಾಗು ವರು. ಅವರು ಹೊತ್ತಿಸಿ ಇವರನ್ನು ತಿಂದುಬಿಡುವರು; ಏಸಾವನ ಮನೆತನದವರಿಗೆ ಯಾರೂ ಉಳಿಯರು; ಕರ್ತನೇ ಅದನ್ನು ನುಡಿದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನ ವಂಶವು ಅಗ್ನಿ, ಯೋಸೇಫನ ವಂಶವು ಜ್ವಾಲೆ, ಏಸಾವನ ವಂಶವು ಕೂಳೆ; ಆ ಅಗ್ನಿಜ್ವಾಲೆಗಳು ಕೂಳೆಯಲ್ಲಿ ಧಗಧಗಿಸುತ್ತಾ ಅದನ್ನು ನುಂಗಿಬಿಡುವವು; ಏಸಾವನ ವಂಶದವರಲ್ಲಿ ಯಾರೂ ಉಳಿಯರು; ಯೆಹೋವನೇ ಇದನ್ನು ನುಡಿದಿದ್ದಾನೆ.
Kannada Bible (KNCL) BSI 2016
ಯಕೋಬವಂಶ ಅಗ್ನಿಯಂತೆ; ಜೋಸೆಫನ ವಂಶ ಜ್ವಾಲೆಯಂತೆ. ಇವೆರಡೂ ಸೇರಿ ಕೂಳೆಯಂತೆ ಇರುವ ಏಸಾವಿನ ವಂಶವನ್ನು ಧಗಧಗನೆ ದಹಿಸಿ ಭಸ್ಮಮಾಡುವುವು. ಏಸಾವಿನ ವಶದಲ್ಲಿ ಯಾರೂ ಉಳಿಯುವುದಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಂತೆ ಧಗಧಗನೆ ದಹಿಸಿ ನಾಶವಾಗುವರು. ಏಸಾವನ ಮನೆತನದವರಲ್ಲಿ ಯಾರೂ ಉಳಿಯರು.” ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.