Obadiah 1:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನೆಗೆವಿನ ಜನರು ಏಸಾವಿನ ಪರ್ವತಗಳಲ್ಲಿ ವಾಸಿಸುವರು. ಬೆಟ್ಟದ ಕೆಳಗೆ ವಾಸಿಸುವವರು ಫಿಲಿಷ್ಟಿಯರ ದೇಶವನ್ನು ಆಕ್ರಮಿಸುವರು. ಎಫ್ರಾಯೀಮ್ ಮತ್ತು ಸಮಾರ್ಯದ ಜನರು ಜೀವಿಸುವರು. ಗಿಲ್ಯಾದ್ ಪ್ರಾಂತ್ಯವು ಬೆನ್ಯಾಮೀನರಿಗೆ ಸೇರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಕ್ಷಿಣ ಪ್ರಾಂತ್ಯದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು, ಇಳಕಲಿನ ಪ್ರದೇಶದವರು ಫಿಲಿಷ್ಟಿಯರನ್ನೂ, ಎಫ್ರಾಯೀಮಿನ ಭೂಮಿಯನ್ನೂ ಮತ್ತು ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು. ಬೆನ್ಯಾಮೀನಿನವರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.
Kannada BSI Bible 2016
ದಕ್ಷಿಣದವರು ಏಸಾವನ ಬೆಟ್ಟವನ್ನೂ ಬೈಲಿನವರು ಫಿಲಿಷ್ಟಿಯರನ್ನೂ ಸ್ವತಂತ್ರಿಸಿಕೊಳ್ಳುವರು; ಎಫ್ರಾಯಾಮಿನ ಹೊಲ ಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನ ಮಾಡಿಕೊಳ್ಳುವರು ಮತ್ತು ಬೆನ್ಯಾವಿಾನನು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಕ್ಷಿಣಪ್ರಾಂತದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು; ಇಳಕಲಿನ ಪ್ರದೇಶದವರು ಫಿಲಿಷ್ಟಿಯವನ್ನೂ ಎಫ್ರಾಯೀವಿುನ ಭೂವಿುಯನ್ನೂ ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು; ಬೆನ್ಯಾಮೀನಿನವರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು;
Kannada Bible (KNCL) BSI 2016
ಆಗ ದಕ್ಷಿಣವಲಯದವರು ಏಸಾವಿನ ಪರ್ವತವನ್ನು ಸ್ವಾಧೀನಪಡಿಸಿಕೊಳ್ಳುವರು. ಪಶ್ಚಿಮದ ಬಯಲು ಸೀಮೆಯವರು ಫಿಲಿಷ್ಟಿಯವನ್ನೂ ಎಫ್ರಯಿಮ್ ಮತ್ತು ಸಮಾರ್ಯದ ಭೂಮಿಯನ್ನೂ ವಶಪಡಿಸಿಕೊಳ್ಳುವರು. ಬೆನ್ಯಾಮಿನ ವಂಶಜರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಕ್ಷಿಣದವರು ಏಸಾವನ ಬೆಟ್ಟವನ್ನೂ ಬಯಲಿನವರು ಫಿಲಿಷ್ಟಿಯರ ದೇಶವನ್ನೂ ಸ್ವತಂತ್ರಿಸಿಕೊಳ್ಳುವರು. ಎಫ್ರಾಯೀಮಿನ ಹೊಲಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನಮಾಡಿಕೊಳ್ಳುವರು ಬೆನ್ಯಾಮೀನನು ಗಿಲ್ಯಾದನ್ನು ವಶಪಡಿಸಿಕೊಳ್ಳುವನು.