Obadiah 1:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಸಂಪೂರ್ಣವಾಗಿ ನಾಶವಾಗುವೆ. ಕಳ್ಳರು ನಿನ್ನ ಬಳಿಗೆ ಬರುವರು, ದರೋಡೆಗಾರರು ರಾತ್ರಿವೇಳೆ ಬರುವರು. ಅವರು ತಮಗೆ ಇಷ್ಟಬಂದದ್ದನ್ನೆಲ್ಲಾ ದೋಚುವರು. ನಿನ್ನ ತೋಟದಲ್ಲಿ ಕೆಲಸಗಾರರು ದ್ರಾಕ್ಷೆಯನ್ನು ಕೊಯ್ಯುವಾಗ ಕೆಲವೊಂದನ್ನು ಬಿಟ್ಟುಬಿಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಳ್ಳರು ನಿನ್ನಲ್ಲಿ ನುಗ್ಗಿದರೆ, ರಾತ್ರಿ ವೇಳೆಯಲ್ಲಿ ಪಂಜುಗಳ್ಳರು ನಿನ್ನ ಮೇಲೆ ಬಿದ್ದರೆ, ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುವರಲ್ಲವೇ? ಆಹಾ! ನೀನು ಎಷ್ಟು ಭಂಗಪಟ್ಟಿದ್ದೀ! ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ, ಹಕ್ಕಲನ್ನು ಉಳಿಸುವುದಿಲ್ಲವೋ?
Kannada BSI Bible 2016
ಕಳ್ಳರು ನಿನ್ನ ಬಳಿಗೆ ಬಂದಿದ್ದರೆ ಸುಲುಕೊಳ್ಳುವವರು ರಾತ್ರಿಯಲ್ಲಿ ಬಂದಿದ್ದರೆ ಎಷ್ಟೋ ಹಾಳಾಗುತ್ತಿದ್ದಿಯಲ್ಲಾ! ಅವರು ತಮಗೆ ಸಾಕಾಗುವಷ್ಟು ಕದ್ದುಕೊಳ್ಳುವರಲ್ಲವೋ? ದ್ರಾಕ್ಷೇಹಣ್ಣನ್ನು ಕೂಡಿಸುವ ವರು ನಿನ್ನ ಬಳಿಗೆ ಬಂದಿದ್ದರೆ ಅವರು ಕೆಲವು ದ್ರಾಕ್ಷೇ ಹಣ್ಣನ್ನು ಬಿಡುವರಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಕಳ್ಳರು ನಿನ್ನಲ್ಲಿ ನುಗ್ಗಿದರೆ, ರಾತ್ರಿವೇಳೆಯಲ್ಲಿ ಪಂಜುಗಳ್ಳರು ನಿನ್ನ ಮೇಲೆ ಬಿದ್ದರೆ ಬೇಕಾದಷ್ಟು ಮಾತ್ರ ದೋಚಿಕೊಂಡು ಹೋಗುವರಲ್ಲವೆ. (ಆಹಾ, ನೀನು ಎಷ್ಟೋ ಭಂಗಪಟ್ಟಿದ್ದೀ!) ದ್ರಾಕ್ಷೆಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನು ಉಳಿಸುವದಿಲ್ಲವೋ?
Kannada Bible (KNCL) BSI 2016
ನಿನ್ನಲ್ಲಿಗೆ ಕಳ್ಳರಾಗಲಿ, ರಾತ್ರಿಯಲ್ಲಿ ಪಂಜುಗಳ್ಳರಾಗಲಿ ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುತ್ತಿದ್ದರಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿನ್ನಲ್ಲಿ ಕಳ್ಳರಾಗಲಿ, ರಾತ್ರಿಯಲ್ಲಿ ಪಂಜುಗಳ್ಳರಾಗಲಿ ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುತ್ತಿದ್ದರಲ್ಲವೆ? ದ್ರಾಕ್ಷಿ ಕೀಳುವವರು ನಿಮ್ಮ ಬಳಿಗೆ ಬಂದರೆ ಸ್ವಲ್ಪ ದ್ರಾಕ್ಷಿಯನ್ನು ಬಿಡುವುದಿಲ್ಲವೇ?