Obadiah 1:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೇಳುವುದೇನೆಂದರೆ, “ಆ ದಿವಸದಲ್ಲಿ ಎದೋಮಿನಲ್ಲಿರುವ ಬುದ್ಧಿವಂತರನ್ನು ನಾಶಮಾಡುವೆನು. ಏಸಾವಿನ ಪರ್ವತದಲ್ಲಿರುವ ಜಾಣರನ್ನು ನಾನು ನಾಶಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ. “ಆ ದಿನದಲ್ಲಿ ನಾನು ಎದೋಮಿನೊಳಗೆ ಜ್ಞಾನಿಗಳನ್ನು ಅಳಿಸದೇ ಬಿಡುವೆನೋ,” ಏಸಾವನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೇ ಇರುವೆನೇ?
Kannada BSI Bible 2016
ಕರ್ತನು ಅನ್ನುವದೇನಂದರೆ--ನಾನು ಆ ದಿನದಲ್ಲಿ ಎದೋಮಿ ನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ಎದೋವಿುನೊಳಗಿಂದ ಜ್ಞಾನಿಗಳನ್ನು ಅಳಿಸದೆ ಬಿಟ್ಟೇನೋ? ಏಸಾವಿನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೆ ಇದ್ದೇನೋ?
Kannada Bible (KNCL) BSI 2016
ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಲ್ಲಿ ಎದೋಮಿನ ಜ್ಞಾನಿಗಳನ್ನೂ ಏಸಾವಿನ ಪರ್ವತದ ಬುದ್ಧಿಜೀವಿಗಳನ್ನೂ ನಾನು ಅಳಿಸದೆ ಬಿಡುವೆನೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಆ ದಿವಸದಲ್ಲಿ,’ ಎದೋಮಿನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೇ?