Philemon 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನೀಗ ಸುವಾರ್ತೆಗೋಸ್ಕರ ಸೆರೆಯಲ್ಲಿರುವಾಗ ನನ್ನ ಸಹಾಯಕ್ಕೆ ಅವನನ್ನು ಇರಿಸಿಕೊಳ್ಳಬೇಕೆಂದಿದ್ದೆನು. ಇಲ್ಲಿ ಅವನು ನನಗೆ ಸಹಾಯ ಮಾಡುತ್ತಾ ನಿನ್ನ ಸೇವೆಯನ್ನೂ ಮಾಡಬಹುದಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಸುವಾರ್ತೆಯ ನಿಮಿತ್ತ ಸೆರೆಮನೆಯಲ್ಲಿರುವಾಗ ನನಗೆ ಉಪಚಾರಮಾಡುವಂತೆ ನಿನಗೆ ಬದಲಾಗಿ ಅವನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಬೇಕೆಂದು ಆಲೋಚಿಸಿದ್ದೆನು.
Kannada BSI Bible 2016
ನಾನು ಸುವಾರ್ತೆಯ ನಿಮಿತ್ತ ಸೆರೆಯಲ್ಲಿರಲಾಗಿ ನಿನಗೆ ಬದಲಾಗಿ ಅವನು ನನಗೆ ಉಪಚಾರ ಮಾಡುವಂತೆ ಅವನನ್ನು ನನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಕೆಂದು ಅಪೇಕ್ಷಿಸಿದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಸುವಾರ್ತೆಯ ನಿವಿುತ್ತ ಸೆರೆಯಲ್ಲಿರಲಾಗಿ ನಿನಗೆ ಬದಲಾಗಿ ಅವನು ನನಗೆ ಉಪಚಾರಮಾಡುವಂತೆ ಅವನನ್ನು ನನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಕೆಂದು ಯೋಚಿಸಿದ್ದೆನು.
Kannada Bible (KNCL) BSI 2016
ಶುಭಸಂದೇಶಕ್ಕೋಸ್ಕರ ನಾನು ಸೆರೆಮನೆಯಲ್ಲಿರುವಾಗ ನಿನ್ನ ಬದಲಾಗಿ ನನಗೆ ಸಹಾಯಮಾಡಲು ಇವನನ್ನು ಇಲ್ಲಿಯೇ ಉಳಿಸಿಕೊಳ್ಳಲು ಇಷ್ಟವಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುವಾರ್ತೆಯ ನಿಮಿತ್ತ ಸೆರೆಯಲ್ಲಿರುವ ನನಗೆ ಉಪಚಾರ ಮಾಡುವಂತೆ ನಿನಗೆ ಬದಲಾಗಿ ಓನೇಸಿಮನನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಲು ಅಪೇಕ್ಷಿಸಿದ್ದೆನು.