Philemon 1:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೌಲನಾದ ನಾನು ನನ್ನ ಸ್ವಂತ ಕೈಗಳಿಂದ ಇದನ್ನು ಬರೆಯುತ್ತಿದ್ದೇನೆ. ಒನೇಸಿಮನು ನಿನಗೆ ಏನಾದರೂ ಕೊಡಬೇಕಾಗಿದ್ದರೆ ನಾನು ಅದನ್ನು ಕೊಡುತ್ತೇನೆ. ನಿನ್ನ ಆತ್ಮಿಕ ಜೀವಿತದ ವಿಷಯದಲ್ಲಿ ನೀನು ನಿನಗೆ ನನಗೆಷ್ಟು ಋಣಿಯಾಗಿರುವೆ ಎಂದು ನಾನೇನೂ ಹೇಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನಗೆ ಹೊಣೆಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕೇ?
Kannada BSI Bible 2016
ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನ್ನ ಸಾಲದಲ್ಲಿದ್ದೀ ಎಂದು ನಾನು ಬೇರೆ ಹೇಳಬೇಕೇ.
Kannada Bible (KNCL) BSI 2016
ಅದನ್ನು ಪೌಲನೆಂಬ ನಾನೇ ಕೊಟ್ಟು ತೀರಿಸುತ್ತೇನೆ ಎಂದು ನನ್ನ ಹಸ್ತಾಕ್ಷರದಲ್ಲೇ ಬರೆದುಕೊಡುತ್ತಿದ್ದೇನೆ. ಆದರೆ ಈಗ ನೀನು ಏನಾಗಿದ್ದೀಯೋ ಅದು ನನ್ನಿಂದಲೇ. ಹೀಗೆ ನೀನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಹೇಳಬೇಕಾಗಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ನನ್ನ ಸ್ವಂತ ಕೈಯಲ್ಲಿ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನು ನಿನ್ನ ಪ್ರಾಣವನ್ನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕಾಗಿಲ್ಲ.