Philippians 1:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವರು ತಮ್ಮಲ್ಲಿ ಪ್ರೀತಿಯಿರುವುದರಿಂದಲೇ ಜನರಿಗೆ ಬೋಧಿಸುತ್ತಾರೆ. ಸುವಾರ್ತೆಯನ್ನು ಪ್ರತಿಪಾದಿಸುವ ಕೆಲಸವನ್ನು ದೇವರು ನನಗೆ ಕೊಟ್ಟನೆಂಬುದು ಇವರಿಗೆ ಗೊತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರಂತೂ ನಾನು ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳುವುದಕ್ಕಾಗಿ ಇಲ್ಲಿ ಹಾಕಲ್ಪಟ್ಟಿದ್ದೆನೆಂದು ತಿಳಿದು ಪ್ರೀತಿಯಿಂದ ಪ್ರಸಿದ್ಧಿಪಡಿಸುತ್ತಿದ್ದಾರೆ.
Kannada BSI Bible 2016
ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರಂತೂ ನಾನು ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳುವದಕ್ಕೆ ಇಲ್ಲಿ ಬಿದ್ದಿರುತ್ತೇನೆಂದು ತಿಳಿದು ಪ್ರೀತಿಯಿಂದ ಪ್ರಸಿದ್ಧಿಪಡಿಸುತ್ತಾರೆ.
Kannada Bible (KNCL) BSI 2016
ಒಲವಿನ ಒತ್ತಾಯದಿಂದ ಸಾರುತ್ತಿದ್ದಾರೆ; ಶುಭಸಂದೇಶದ ಸತ್ಯವನ್ನು ಸಮರ್ಥಿಸುವುದಕ್ಕಾಗಿ ನಾನು ಬಂಧಿತನೆಂದು ಇವರು ಬಲ್ಲರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರಾದರೋ, ನಾನು ಸುವಾರ್ತೆಗಾಗಿ ನೇಮಕವಾಗಿದ್ದೇವೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.