Philippians 1:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ನನಗೆ ತೊಂದರೆ ಮಾಡಿದರೂ ನಾನು ಚಿಂತಿಸುವುದಿಲ್ಲ. ಅವರ ಉದ್ದೇಶವು ಯಥಾರ್ಥವಾಗಿದ್ದರೂ ಯಥಾರ್ಥವಾಗಿಲ್ಲದಿದ್ದರೂ ನನಗದು ಮುಖ್ಯವಲ್ಲ. ಅವರು ಕ್ರಿಸ್ತನ ವಿಷಯವಾಗಿ ಜನರಿಗೆ ಬೋಧಿಸುತ್ತಿರುವುದರಿಂದ ನಾನು ಉಲ್ಲಾಸಿಸುತ್ತೇನೆ, ಇನ್ನು ಮುಂದೆಯೂ ಉಲ್ಲಾಸಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗಾದರೇನು? ಯಾವ ರೀತಿಯಿಂದಾದರೂ ಸರಿಯೇ ಕಪಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು, ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು.
Kannada BSI Bible 2016
ಹೇಗಾದರೇನು? ಯಾವ ರೀತಿಯಿಂದಾದರೂ ಅಂದರೆ ಕಪಟದಿಂದಾ ಗಲಿ ಇಲ್ಲವೆ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿ ಸುವದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ ಹೌದು, ಮುಂದೆಯೂ ಸಂತೋಷಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಾದರೇನು? ಯಾವ ರೀತಿಯಿಂದಾದರೂ ಕಪಟದಿಂದಾಗಲಿ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವದುಂಟು; ಇದಕ್ಕೆ ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು.
Kannada Bible (KNCL) BSI 2016
ಅವರ ಉದ್ದೇಶ ಏನೇ ಆಗಿರಲಿ, ನನಗದು ಮುಖ್ಯವಲ್ಲ. ಕ್ರಿಸ್ತಯೇಸುವನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೇಗಾದರೇನು? ಕಪಟದಿಂದಾಗಲಿ, ಸತ್ಯದಿಂದಾಗಲಿ ಯಾವ ರೀತಿಯಿಂದಾದರೂ ಕ್ರಿಸ್ತನನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ. ಹೌದು ಮುಂದೆಯೂ ಸಂತೋಷಿಸುವೆನು.