Philippians 1:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ನನಗೋಸ್ಕರ ಪ್ರಾರ್ಥಿಸುತ್ತಿದ್ದೀರಿ ಮತ್ತು ಯೇಸು ಕ್ರಿಸ್ತನ ಆತ್ಮನು ನನಗೆ ಸಹಾಯ ಮಾಡುತ್ತಿದ್ದಾನೆ. ಆದ್ದರಿಂದ ನನ್ನ ಈ ಕಷ್ಟವು ನನಗೆ ರಕ್ಷಣೆಯನ್ನು ಉಂಟು ಮಾಡುವುದೆಂದು ನನಗೆ ಗೊತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ನಿಮ್ಮ ವಿಜ್ಞಾಪನೆಯಿಂದಲೂ ಮತ್ತು ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.
Kannada BSI Bible 2016
ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ನನಗೆ ಸಂಭವಿಸಿರುವದು ನೀವು ದೇವರಿಗೆ ಮಾಡುವ ವಿಜ್ಞಾಪನೆಯಿಂದಲೂ ಕ್ರಿಸ್ತನು ಹೇರಳವಾಗಿ ದಯಪಾಲಿಸುವ ಆತ್ಮನ ಸಹಾಯದಿಂದಲೂ ನನ್ನ ಪರಮಹಿತಕ್ಕೆ ಅನುಕೂಲಿಸುವದೆಂದು ಬಲ್ಲೆನು.
Kannada Bible (KNCL) BSI 2016
ಹೌದು, ನನಗದು ತುಂಬಾ ಸಂತೋಷದ ವಿಷಯ. ನಿಮ್ಮ ಪ್ರಾರ್ಥನಾ ಫಲದಿಂದಲೂ ಯೇಸುಕ್ರಿಸ್ತರು ಕೊಡುವ ಆತ್ಮದ ನೆರವಿನಿಂದಲೂ ನನಗೆ ಬಿಡುಗಡೆ ಖಚಿತವೆಂದು ಬಲ್ಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಪ್ರಾರ್ಥನೆಯಿಂದಲೂ ಕ್ರಿಸ್ತ ಯೇಸು ಕೊಡುವ ಪವಿತ್ರಾತ್ಮರ ಸಹಾಯದಿಂದ ನನಗೆ ಸಂಭವಿಸಿದವುಗಳು ನನ್ನ ಬಿಡುಗಡೆಗಾಗಿಯೇ ಎಂದು ನಾನು ಬಲ್ಲೆನು.