Philippians 1:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಕ್ರಿಸ್ತನಲ್ಲಿ ನಂಬಿಕೆಯಿಟ್ಟದ್ದು ದೇವರ ಅನುಗ್ರಹದಿಂದಲೇ. ಅಷ್ಟು ಮಾತ್ರವೇ ಅಲ್ಲ, ಕ್ರಿಸ್ತನಿಗೋಸ್ಕರ ಕಷ್ಟಪಡುವುದೂ ಸಹ ನಿಮಗೆ ಅನುಗ್ರಹವಾಗಿ ದೊರೆಯಿತು. ಇವೆರಡೂ ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುತ್ತವೆ. 30ನಾನು ನಿಮ್ಮ ಮಧ್ಯದಲ್ಲಿದ್ದಾಗ ಸುವಾರ್ತೆಗೆ ವಿರುದ್ಧವಾಗಿದ್ದ ಜನರೊಂದಿಗೆ ಮಾಡಿದ ಹೋರಾಟವನ್ನು ನೋಡಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.
Kannada BSI Bible 2016
ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ನಿಮಗೆ ಅನುಗ್ರಹವಾಗಿ ದೊರೆಯಿತು.
Kannada Bible (KNCL) BSI 2016
ಕ್ರಿಸ್ತಯೇಸುವನ್ನು ನೀವು ವಿಶ್ವಾಸಿಸುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವ ಸೌಭಾಗ್ಯವೂ ನಿಮ್ಮದಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವುದೂ ನಿಮಗೆ ದಾನವಾಗಿ ಕೊಡಲಾಗಿದೆ.