Philippians 1:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಸುವಾರ್ತಾಸೇವೆಯಲ್ಲಿ ನೀವು ಪಾಲುಗಾರರಾದ ಕಾರಣ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ನೀವು ನಂಬಿಕೊಂಡಂದಿನಿಂದ ಇಲ್ಲಿಯವರೆಗೂ ನನಗೆ ಸಹಾಯ ಮಾಡಿದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಮೊದಲಿನಿಂದ ಇಂದಿನವರೆಗೂ ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ.
Kannada BSI Bible 2016
ನೀವು ಮೊದಲಿನ ದಿನದಿಂದ ಇಂದಿನವರೆಗೂ ಸುವಾರ್ತಾ ಸೇವೆಗಾಗಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾ ಸ್ತುತಿ ಮಾಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಮೊದಲಿನಿಂದ ಇಂದಿನವರೆಗೂ ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ.
Kannada Bible (KNCL) BSI 2016
ಏಕೆಂದರೆ, ನಾನು ನಿಮ್ಮನ್ನು ಸಂಧಿಸಿದ ಮೊದಲ ದಿನದಿಂದ ಇಂದಿನವರೆಗೂ ನೀವು ನನ್ನೊಡನೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸುತ್ತಿರುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ನೀವು ಮೊದಲನೆಯ ದಿನದಿಂದ ಇಂದಿನವರೆಗೂ ಸುವಾರ್ತೆಯಲ್ಲಿ ಸಹಭಾಗಿಗಳಾಗಿದ್ದೀರಿ.