Philippians 2:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಪ್ರಿಯ ಸ್ನೇಹಿತರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ ನಾನು ದೂರವಿರುವಾಗಲೂ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿರಿ. ನೀವು ದೇವರಿಗೆ ಭಯಭಕ್ತಿಯಿಂದಿದ್ದು ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
Kannada BSI Bible 2016
ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಕೇಳಿದಂತೆ ಈಗಲೂ ಕೇಳಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
Kannada Bible (KNCL) BSI 2016
ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ.