Philippians 2:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.
Kannada BSI Bible 2016
ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷ, ನಿಮ್ಮೆಲ್ಲರ ಕೂಡ ಸಂತೋಷ.
Kannada Bible (KNCL) BSI 2016
ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು.