Philippians 2:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಬಳಿಗೆ ತಿಮೊಥೆಯನನ್ನು ಆದಷ್ಟು ಬೇಗನೆ ಕಳುಹಿಸಿಕೊಡಲು ಪ್ರಭುವಾದ ಯೇಸುವಿನಲ್ಲಿ ನಿರೀಕ್ಷಿಸುತ್ತಿದ್ದೇನೆ. ಅವನ ಮೂಲಕ ನಿಮ್ಮ ಯೋಗಕ್ಷೇವುವನ್ನು ತಿಳಿದುಕೊಳ್ಳುವುದರಿಂದ ನನಗೆ ಪ್ರೋತ್ಸಾಹವಾಗಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಆದರಣೆ ಹೊಂದಿದೆನು.
Kannada BSI Bible 2016
ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಕರ್ತನಾದ ಯೇಸುವಿನ ಚಿತ್ತವಾದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಧೈರ್ಯತಂದುಕೊಂಡೇನು.
Kannada Bible (KNCL) BSI 2016
ಪ್ರಭು ಯೇಸುವಿನ ಚಿತ್ತವಾದಲ್ಲಿ ತಿಮೊಥೇಯನನ್ನು ನಿಮ್ಮ ಬಳಿಗೆ ಬೇಗನೆ ಕಳುಹಿಸಬೇಕೆಂದಿದ್ದೇನೆ. ಆತನಿಂದ ನಿಮ್ಮ ಸಮಾಚಾರವನ್ನು ತಿಳಿದು ನಾನು ಹರ್ಷಗೊಳ್ಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವುದಕ್ಕೆ ಕರ್ತ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಹೀಗೆ ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಉತ್ತೇಜನಗೊಳ್ಳುವೆನು.