Philippians 2:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಪಫ್ರೊದೀತನು ಕ್ರಿಸ್ತನಲ್ಲಿ ನನ್ನ ಸಹೋದರನಾಗಿದ್ದಾನೆ. ಕ್ರಿಸ್ತನ ಸೈನ್ಯದಲ್ಲಿ ಅವನು ನನ್ನೊಂದಿಗೆ ಕೆಲಸ ಮಾಡುತ್ತಿದ್ದಾನೆ ಮತ್ತು ಸೇವೆ ಮಾಡುತ್ತಿದ್ದಾನೆ. ನನಗೆ ಸಹಾಯಬೇಕಿದ್ದಾಗ, ನೀವು ಅವನನ್ನು ನನ್ನ ಬಳಿಗೆ ಕಳುಹಿಸಿಕೊಟ್ಟಿರಿ. ಈಗ ನಾನು ಅವನನ್ನು ನಿಮ್ಮ ಬಳಿಗೆ ಮತ್ತೆ ಕಳುಹಿಸಬೇಕೆಂದಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಕೊರತೆಯನ್ನು ನೀಗುವುದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ, ಜೊತೆಸೇವಕನೂ, ಸಹಸೇನಾನಿಯೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ಭಾವಿಸಿದ್ದೇನೆ.
Kannada BSI Bible 2016
ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ ಜೊತೆಕೆಲಸದವನೂ ಸಹಭಟನೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನೆನಸಿದ್ದೇನೆ.
Kannada Bible (KNCL) BSI 2016
ನನಗೆ ನೆರವಾಗಲು ನೀವು ಕಳುಹಿಸಿದ ಸಹೋದರ ಎಪಫ್ರೋದಿತನು ನಿಮ್ಮಲ್ಲಿಗೆ ಹಿಂದಿರುಗುವುದು ಅವಶ್ಯವೆಂದು ಭಾವಿಸುತ್ತೇನೆ. ಅವನು ನನ್ನೊಂದಿಗೆ ದುಡಿಯುತ್ತಾ, ಹೋರಾಡುತ್ತಾ ಬಂದಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನನ್ನ ಸಹೋದರನೂ ಜೊತೆ ಕೆಲಸದವನೂ ಸಹಸೈನಿಕನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ನಾನು ನೆನೆಸಿದ್ದೇನೆ. ಅವನು ನನ್ನ ಕೊರತೆಯಲ್ಲಿ ಸೇವೆ ಮಾಡುವಂತೆ ನೀವು ಕಳುಹಿಸಿದ ನಿಮ್ಮ ಸಂದೇಶಕನೂ ಆಗಿದ್ದಾನೆ.