Philippians 2:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಹಾ ಆನಂದದಿಂದ ಪ್ರಭುವಿನಲ್ಲಿ ಅವನನ್ನು ಸ್ವಾಗತಿಸಿರಿ. ಎಪಫ್ರೊದೀತನಂಥ ಜನರನ್ನು ಗೌರವಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕೊರತೆಯಾದದ್ದನ್ನು ತುಂಬುವುದಕ್ಕಾಗಿ ಅವನು ಜೀವದ ಆಸೆಯನ್ನು ತೊರೆದು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಸ್ಥಿತಿಯಲ್ಲಿದುದ್ದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ.
Kannada BSI Bible 2016
ಆದದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯಮಾಡದೆ ಕ್ರಿಸ್ತನ ಕೆಲಸದ ನಿವಿುತ್ತ ಸಾಯುವ ಹಾಗಿದ್ದನೆಂದು ನೀವು ತಿಳಿದು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ.
Kannada Bible (KNCL) BSI 2016
ಪ್ರಭುವಿನ ಹೆಸರಿನಲ್ಲಿ ನೀವು ಅವನನ್ನು ತುಂಬು ಹೃದಯದಿಂದ ಸ್ವಾಗತಿಸಿರಿ. ಅವನಂಥವರಿಗೆ ಸೂಕ್ತ ಗೌರವ ಸಲ್ಲಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಅವನನ್ನು ಪೂರ್ಣ ಆನಂದದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.