Philippians 2:30 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಕ್ರಿಸ್ತನ ಕೆಲಸಕ್ಕಾಗಿ ಬಹುಮಟ್ಟಿಗೆ ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ಅವನಿಗೆ ಮಾನ್ಯತೆ ದೊರೆಯಬೇಕು. ನನಗೆ ಸಹಾಯಮಾಡಲು ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಈಡುಮಾಡಿಕೊಂಡನು. ಈ ರೀತಿಯ ಸಹಾಯ ಮಾಡಲು ನಿಮಗೆ ಸಾಧ್ಯವಾಗಲಿಲ್ಲ.
Kannada BSI Bible 2016
ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
Kannada Bible (KNCL) BSI 2016
ಕ್ರಿಸ್ತಯೇಸುವಿನ ಸೇವೆಯಲ್ಲಿ ಅವನು ಸತ್ತು ಬದುಕಿದ್ದಾನೆ. ನೀವು ಕೊಡಲು ಸಾಧ್ಯವಾಗದೆ ಹೋದ ನೆರವನ್ನು ಅವನು ನನಗೆ ಕೊಟ್ಟು ಸೇವೆಯನ್ನು ಪೂರ್ಣಗೊಳಿಸಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಹಾಗಿದ್ದನು. ನೀವು ನನಗೆ ಮಾಡಲು ಸಾಧ್ಯವಾಗದೆ ಹೋದ ಸಹಾಯವನ್ನು ತಾನೇ ಪೂರ್ತಿ ಮಾಡುವುದಕ್ಕಾಗಿ, ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಗುರಿಪಡಿಸಿಕೊಂಡನು.