Philippians 3:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಸಹೋದರ ಸಹೋದರಿಯರೇ, ಪ್ರಭುವಿನಲ್ಲಿ ಸಂತೋಷವಾಗಿರಿ. ನಾನು ಮೊದಲು ಬರೆದದ್ದನ್ನೇ ಮತ್ತೆ ಬರೆಯಲು ನನಗೆ ಬೇಸರವೇನೂ ಇಲ್ಲ; ಏಕೆಂದರೆ ಅದು ನಿಮ್ಮನ್ನು ಮತ್ತಷ್ಟು ಸಂರಕ್ಷಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಡೆಯದಾಗಿ ನನ್ನ ಸಹೋದರರೇ, ಕರ್ತನಲ್ಲಿ ಸಂತೋಷಪಡಿರಿ. ಮೊದಲು ತಿಳಿಸಿದ ಅದೇ ಮಾತುಗಳನ್ನು ಪುನಃ ನಿಮಗೆ ಬರೆಯುವುದಕ್ಕೆ ನನಗೇನೂ ಬೇಸರವಿಲ್ಲ, ಅವುಗಳು ನಿಮ್ಮನ್ನು ಭದ್ರಪಡಿಸುವವು.
Kannada BSI Bible 2016
ಕಡೇದಾಗಿ ನನ್ನ ಸಹೋದರರೇ, ಕರ್ತ ನಲ್ಲಿ ಸಂತೋಷಪಡಿರಿ. ತಿರಿಗಿ ನಿಮಗೆ ಬರೆಯುವದರಲ್ಲಿ ನನಗೇನೂ ಬೇಸರವಿಲ್ಲ; ನಿಮ್ಮನ್ನಾ ದರೋ ಅದು ಭದ್ರಪಡಿಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಡೇ ಮಾತೇನಂದರೆ ನನ್ನ ಸಹೋದರರೇ, ಕರ್ತನಲ್ಲಿ ಸಂತೋಷಪಡಿರಿ. ಮೊದಲು ತಿಳಿಸಿದ ಮಾತುಗಳನ್ನು ತಿರಿಗಿ ನಿಮಗೆ ಬರೆಯುವದರಲ್ಲಿ ನನಗೇನೂ ಬೇಸರವಿಲ್ಲ; ನಿಮ್ಮನ್ನಾದರೋ ಅದು ದೃಢಮಾಡುವದು.
Kannada Bible (KNCL) BSI 2016
ಕೊನೆಯದಾಗಿ ಸಹೋದರರೇ, ಪ್ರಭುವಿನಲ್ಲಿ ಆನಂದಿಸಿರಿ. ನಾನು ನಿಮಗೆ ಮೊದಲೇ ತಿಳಿಸಿದಂತೆ ಇದನ್ನು ಮತ್ತೆ ಮತ್ತೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ; ಇದು ನಿಮ್ಮ ಹಿತಕ್ಕಾಗಿಯೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಡೆಯದಾಗಿ ನನ್ನ ಪ್ರಿಯರೇ, ಕರ್ತನಲ್ಲಿ ಆನಂದಿಸಿರಿ. ಬರೆದದ್ದನ್ನೇ ನಿಮಗೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ, ಅದು ನಿಮಗೆ ಸುರಕ್ಷಿತವೇ.