Philippians 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕ್ರಿಸ್ತನನ್ನೂ ಪುನರುತ್ಥಾನದ ಶಕ್ತಿಯನ್ನೂ ತಿಳಿದುಕೊಂಡು ಆತನ ಸಂಕಟದಲ್ಲಿ ಪಾಲುಗಾರನಾಗಿ ಆತನ ಮರಣದಲ್ಲಿ ಆತನಂತಾಗಬೇಕೆಂಬುದೇ ನನ್ನ ಅಪೇಕ್ಷೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ.
Kannada BSI Bible 2016
ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳುಕೊಂಡು ಆತನ ಮರಣದ ವಿಷಯದಲ್ಲಿ ಆತನಿಗೆ ಸರೂಪನಾಗಬೇಕೆಂಬದೇ ನನ್ನ ಕುತೂಹಲವಾಗಿದೆ.
Kannada Bible (KNCL) BSI 2016
ಯೇಸುಸ್ವಾಮಿಯನ್ನು ಅರಿಯಬೇಕು; ಅವರ ಪುನರುತ್ಥಾನದ ಪ್ರಭಾವವನ್ನು ಅನುಭವಿಸಬೇಕು; ಅವರ ಯಾತನೆಗಳಲ್ಲಿ ಪಾಲುಗೊಳ್ಳಬೇಕು; ಅವರ ಮರಣದಲ್ಲಿ ಅವರಂತೆಯೇ ಆಗಬೇಕು - ಇದೇ ನನ್ನ ಹೆಬ್ಬಯಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತನನ್ನೂ ಅವರ ಪುನರುತ್ಥಾನದ ಶಕ್ತಿಯನ್ನೂ ನಾನು ಅರಿತುಕೊಂಡು, ಕ್ರಿಸ್ತನ ಶ್ರಮೆಯಲ್ಲಿ ಪಾಲುಗೊಳ್ಳುವ ಅನ್ಯೋನ್ಯತೆಯನ್ನೂ ಅವರ ಮರಣದಲ್ಲಿ ಅವರ ಹಾಗೆ ಆಗುವುದನ್ನೂ ತಿಳಿಯುವುದೇ ನನ್ನ ಅಪೇಕ್ಷೆ.