Philippians 3:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರ ಸಹೋದರಿಯರೇ, ನಾನಿನ್ನೂ ಆ ಗುರಿಯನ್ನು ಮುಟ್ಟಿಲ್ಲವೆಂಬುದು ನನಗೆ ಗೊತ್ತಿದೆ. ಆದರೆ ನಾನು ಯಾವಾಗಲೂ ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ನನ್ನ ಮುಂದಿರುವ ಗುರಿಯನ್ನು ಮುಟ್ಟಲು ನನ್ನಿಂದಾದಷ್ಟರ ಮಟ್ಟಿಗೆ ಓಡುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವುದಕ್ಕಾಗಿ ಎದೆಬೊಗ್ಗಿದವನಾಗಿ,
Kannada BSI Bible 2016
ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ನಾನಂತೂ ಹಿಡಿದುಕೊಂಡವನೆಂದು ನನ್ನನ್ನು ಈವರೆಗೂ ಎಣಿಸಿಕೊಳ್ಳುವದಿಲ್ಲ; ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕೆ ಎದೆ ಬೊಗ್ಗಿದವನಾಗಿ
Kannada Bible (KNCL) BSI 2016
ಸಹೋದರರೇ, ಆ ಗುರಿಯನ್ನು ತಲುಪಿದ್ದೇನೆಂದು ನಾನೆಂದೂ ಹೇಳಿಕೊಂಡಿಲ್ಲ. ಆದರೆ ಇದು ನಿಜ. ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು, ಮುಂದಿನವುಗಳ ಮೇಲೆ ಕಣ್ಣಿಟ್ಟು ನಾನು ಓಡುತ್ತಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನಾನಂತೂ ಆ ಗುರಿಯನ್ನು ತಲುಪಿದ್ದೇನೆಂದು ಭಾವಿಸಿಕೊಂಡಿಲ್ಲ. ಆದರೆ ಒಂದು ಸಂಗತಿ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು, ಮುಂದಿನ ವಿಷಯಗಳನ್ನು ಮಾತ್ರ ಲಕ್ಷ್ಯವನ್ನಾಗಿ ಮಾಡಿಕೊಂಡು ಅದನ್ನೇ ಪಡೆದುಕೊಳ್ಳುವುದಕ್ಕಾಗಿ ಓಡುತ್ತಿದ್ದೇನೆ.