Philippians 3:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತ್ಮಿಕತೆಯಲ್ಲಿ ಪರಿಪೂರ್ಣವಾದ ಮಟ್ಟಕ್ಕೆ ಬಂದಿರುವ ನಾವೆಲ್ಲರೂ ಇದೇ ರೀತಿ ಯೋಚಿಸಬೇಕು. ನೀವು ಈ ಸಂಗತಿಗಳಲ್ಲಿ ಯಾವುದನ್ನಾದರೂ ಒಪ್ಪಿಕೊಳ್ಳದಿದ್ದರೆ ದೇವರೇ ನಿಮಗೆ ಅದನ್ನು ಸ್ಪಷ್ಟಪಡಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮಲ್ಲಿ ಪ್ರವೀಣರಾದವರೆಲ್ಲರೂ ಈ ವಿಷಯದಲ್ಲಿ ಇದೇ ಅಭಿಪ್ರಾಯವುಳ್ಳವರಾಗಿರಿ. ಮತ್ತು ಯಾವುದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನು ದೇವರು ನಿಮಗೆ ತೋರಿಸಿಕೊಡುವನು.
Kannada BSI Bible 2016
ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮಲ್ಲಿ ಪ್ರವೀಣರಾದವರು ಇದೇ ಅಭಿಪ್ರಾಯವುಳ್ಳವರಾಗಿರೋಣ. ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.
Kannada Bible (KNCL) BSI 2016
ನಮ್ಮಲ್ಲಿ ಪರಿಣತರಾದವರು ಈ ವಿಷಯದಲ್ಲಿ ಇದೇ ಮನೋಭಾವನೆಯಿಂದ ಇರಬೇಕು. ಯಾವುದಾದರೂ ಒಂದು ವಿಷಯದಲ್ಲಿ ನೀವು ಭಿನ್ನಾಭಿಪ್ರಾಯ ಉಳ್ಳವರಾಗಿದ್ದರೆ ದೇವರು ನಿಜಾಂಶವನ್ನು ಸ್ಪಷ್ಟೀಕರಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಮ್ಮಲ್ಲಿ ಆತ್ಮಿಕ ಪರಿಪಕ್ವತೆಯುಳ್ಳವರು ಇದೇ ಮನೋಭಾವವುಳ್ಳವರಾಗಿರಬೇಕು. ಕೆಲವು ವಿಷಯಗಳ ಮೇಲೆ ಭಿನ್ನಾಭಿಪ್ರಾಯವಿದ್ದರೆ, ಅದನ್ನೂ ದೇವರು ನಿಮಗೆ ಸ್ಪಷ್ಟಪಡಿಸುವರು.