Philippians 3:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರ ಸಹೋದರಿಯರೇ, ನೀವೆಲ್ಲರೂ ನನ್ನಂತೆ ಜೀವಿಸಲು ಪ್ರಯತ್ನಿಸಿ. ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ಜೀವಿಸುವವರನ್ನು ಅನುಸರಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ನೀವೆಲ್ಲರು ನನ್ನೊಂದಿಗೆ ಸೇರಿ ನನ್ನನ್ನು ಅನುಸರಿಸುವವರಾಗಿರಿ ಮತ್ತು ನಾವು ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.
Kannada BSI Bible 2016
ಸಹೋದರರೇ, ನೀವೆಲ್ಲರೂ ನನ್ನನ್ನು ಅನುಸರಿ ಸುವವರಾಗಿರ್ರಿ; ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಗುರುತಿ ಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ನೀವೆಲ್ಲರು ನನ್ನನ್ನು ಅನುಸರಿಸುವವರಾಗಿರಿ; ಮತ್ತು ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.
Kannada Bible (KNCL) BSI 2016
ಸಹೋದರರೇ, ನೀವು ನನ್ನನ್ನು ಅನುಸರಿಸಿರಿ. ನಮ್ಮಂತೆ ಆದರ್ಶಜೀವನ ನಡೆಸುವವರನ್ನು ಅನುಸರಿಸಿ ಬಾಳಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನೀವು ನನ್ನನ್ನು ಅನುಸರಿಸುವವರಾಗಿರಿ. ನಮ್ಮ ಹಾಗೆ ಬಾಳುವ ಆದರ್ಶದ ಪ್ರಕಾರ ನಡೆದುಕೊಳ್ಳುವವರನ್ನು ಗಮನಿಸಿರಿ.