Philippians 3:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನೇಕರು ಕ್ರಿಸ್ತನ ಶಿಲುಬೆಗೆ ವೈರಿಗಳೊ ಎಂಬಂತೆ ಜೀವಿಸುತ್ತಾರೆ. ಅವರ ಬಗ್ಗೆ ನಾನು ನಿಮಗೆ ಅನೇಕ ಸಲ ತಿಳಿಸಿದ್ದೇನೆ. ಈಗಲೂ ಕಣ್ಣೀರಿನಿಂದ ಹೇಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
Kannada BSI Bible 2016
(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
Kannada Bible (KNCL) BSI 2016
ಕ್ರಿಸ್ತಯೇಸುವಿನ ಶಿಲುಬೆಗೆ ವಿರೋಧವಾಗಿ ನಡೆಯುವವರು ಅನೇಕರಿದ್ದಾರೆ. ಇದನ್ನು ನಾನು ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಅತೀವ ದುಃಖದಿಂದ ಹೇಳುತ್ತಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ಬಾಳುತ್ತಿದ್ದಾರೆ. ಅವರ ವಿಷಯದಲ್ಲಿ ನಾನು ನಿಮಗೆ ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಕಣ್ಣೀರಿನಿಂದ ಹೇಳುತ್ತೇನೆ.