Philippians 3:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.
Kannada BSI Bible 2016
ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು, ಅವರು ಪ್ರಪಂಚದ ಕಾರ್ಯಗಳ ಮೇಲೆ ಮನಸ್ಸಿಡುವವರು. ನಾವಾದರೋ ಪರಲೋಕಸಂಸ್ಥಾನದವರು;
Kannada Bible (KNCL) BSI 2016
ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ.