Philippians 3:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವದರೋ ಪರಲೋಕ ಸಂಸ್ಥಾನದವರು. ನಮ್ಮ ರಕ್ಷಕನು ಅಲ್ಲಿಂದಲೇ ಬರುವುದನ್ನು ನಾವು ಎದುರುನೋಡುತ್ತಿದ್ದೇವೆ. ಪ್ರಭುವಾದ ಯೇಸು ಕ್ರಿಸ್ತನೇ ನಮ್ಮ ರಕ್ಷಕನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.
Kannada BSI Bible 2016
ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವದನ್ನು ಎದುರುನೋಡುತ್ತಾ ಇದ್ದೇವೆ.
Kannada Bible (KNCL) BSI 2016
ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು, ಉದ್ಧಾರಕರಾದ ಪ್ರಭು ಯೇಸುಕ್ರಿಸ್ತರು ಪುನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಮ್ಮ ಪೌರತ್ವವು ಪರಲೋಕದಲ್ಲಿದೆ. ನಾವು ಪರಲೋಕದಿಂದಲೇ ರಕ್ಷಕರಾಗಿರುವ ಒಬ್ಬರ ಬರುವಿಕೆಗಾಗಿ ಆತುರದಿಂದ ಎದುರುನೋಡುತ್ತಿದ್ದೇವೆ. ಅವರೇ ಕರ್ತದೇವರು ಆಗಿರುವ ಕ್ರಿಸ್ತ ಯೇಸು.