Philippians 3:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು. ನಾನು ಇಸ್ರೇಲ್ ವಂಶದವನು ಮತ್ತು ಬೆನ್ಯಾಮೀನನ ಕುಲದವನು. ನಾನು ಇಬ್ರಿಯನು ಮತ್ತು ನನ್ನ ತಂದೆತಾಯಿಗಳು ಸಹ ಇಬ್ರಿಯರು. ನಾನು ಮೋಶೆಯ ಧರ್ಮಶಾಸ್ತ್ರವನ್ನು ಮುಖ್ಯವಾದದ್ದೆಂದು ಪರಿಗಣಿಸಿ ಫರಿಸಾಯನಾದೆನು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು, ಧರ್ಮಶಾಸ್ತ್ರಗಳ ದೃಷ್ಟಿಯಿಂದ ನೋಡಿದರೆ ನಾನು ಫರಿಸಾಯನು,
Kannada BSI Bible 2016
ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್‌ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನೇಮನಿಷ್ಠೆಗಳನ್ನು ನೋಡಿದರೆ ನಾನು ಫರಿಸಾಯನು,
Kannada Bible (KNCL) BSI 2016
ಹುಟ್ಟಿದ ಎಂಟನೆಯ ದಿನ ನನಗೆ ಸುನ್ನತಿಯಾಯಿತು; ಹುಟ್ಟಿನಿಂದ ನಾನು ಇಸ್ರಯೇಲನು, ಬೆನ್ಯಮೀನ ಕುಲದವನು; ಅಪ್ಪಟ ಹಿಬ್ರಿಯನು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು; ಬೆನ್ಯಾಮೀನನ ಕುಲದವನು; ಹೀಬ್ರಿಯರಿಂದ ಹುಟ್ಟಿದ ಹೀಬ್ರಿಯನು; ಮೋಶೆಯ ನಿಯಮದ ಅನುಸಾರವಾಗಿ ನಾನು ಫರಿಸಾಯನು.