Philippians 4:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ನಿಮ್ಮನ್ನು ನೋಡಬಯಸುತ್ತೇನೆ. ನೀವು ನನಗೆ ಆನಂದವನ್ನು ಉಂಟುಮಾಡಿ, ನಿಮ್ಮ ವಿಷಯದಲ್ಲಿ ನಾನು ಹೆಮ್ಮಪಡುವಂತೆ ಮಾಡಿದ್ದೀರಿ. ನಾನು ನಿಮಗೆ ಹೇಳಿದಂತೆ ಪ್ರಭುವನ್ನು ಅನುಸರಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.
Kannada BSI Bible 2016
ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಪ್ರಿಯರೂ ಇಷ್ಟರೂ ಆದ ನನ್ನ ಸಹೋದರರೇ, ನನಗೆ ಸಂತೋಷವೂ ಜಯಮಾಲೆಯೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ; ಪ್ರಿಯರೇ.
Kannada Bible (KNCL) BSI 2016
ಹೀಗಿರಲಾಗಿ ಒಲವಿನ ಸಹೋದರರೇ, ನನ್ನ ಅತಿ ಪ್ರಿಯರೇ, ಆಪ್ತರೇ, ನನ್ನ ಮುದವೂ ಮುಕುಟವೂ ಆದವರೇ, ಪ್ರಭುವಿನಲ್ಲಿ ದೃಢ ವಿಶ್ವಾಸಿಗಳಾಗಿ ಬಾಳಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ!
Recommended Reading