Philippians 4:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಈ ಮಾತುಗಳನ್ನು ಹೇಳುತ್ತಿರುವುದು ನನಗಿರುವ ಕೊರತೆಯ ದೆಸೆಯಿಂದಲ್ಲ. ನನ್ನಲ್ಲಿರುವಂಥವುಗಳಲ್ಲಿ ಮತ್ತು ನನಗೆ ಸಂಭವಿಸುವ ಪ್ರತಿಯೊಂದರಲ್ಲಿ ತೃಪ್ತನಾಗಿರಲು ನಾನು ಕಲಿತುಕೊಂಡಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ.
Kannada BSI Bible 2016
ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೊರತೆಯಲ್ಲಿದ್ದೇನೆಂದು ಸೂಚಿಸುವದಕ್ಕೆ ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತುಕೊಂಡಿದ್ದೇನೆ.
Kannada Bible (KNCL) BSI 2016
ನಾನು ಯಾವುದೋ ಕೊರತೆಯಲ್ಲಿರುವೆನೆಂದು ಸೂಚಿಸಲು ಇದನ್ನು ಹೇಳುತ್ತಿಲ್ಲ. ನಾನು ಯಾವ ಸ್ಥಿತಿಯಲ್ಲಿದ್ದರೂ ತೃಪ್ತಿಯಿಂದಿರಲು ಕಲಿತುಕೊಂಡಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗೆ ಕೊರತೆಯಿದೆ ಎಂಬುದಕ್ಕಾಗಿ ನಾನು ಇದನ್ನು ಹೇಳುತ್ತಿಲ್ಲ. ಯಾವುದೇ ಪರಿಸ್ಥಿತಿಯಲ್ಲಿ ಸಂತೃಪ್ತನಾಗಿರುವುದನ್ನು ನಾನು ಕಲಿತುಕೊಂಡಿದ್ದೇನೆ.