Philippians 4:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಸಿವೆಯಿಂದಿರುವಾಗಲೂ ಸಮೃದ್ಧಿಯುಳ್ಳವನಾಗಿರುವಾಗಲೂ ಹೇಗೆ ಜೀವಿಸಬೇಕೆಂಬುದು ನನಗೆ ತಿಳಿದಿದೆ. ಯಾವ ಸಮಯದಲ್ಲಾಗಲಿ ಯಾವ ಪರಿಸ್ಥಿತಿಯಲ್ಲಾಗಲಿ ಸಂತೋಷದಿಂದಿರುವ ಗುಟ್ಟು ನನಗೆ ತಿಳಿದಿದೆ. ಊಟಕ್ಕೆ ಬೇಕಾದಷ್ಟು ಇರುವಾಗಲೂ ಇಲ್ಲದಿರುವಾಗಲೂ ನನಗೆ ಅಗತ್ಯವಾದುವುಗಳನ್ನು ಹೊಂದಿರುವಾಗಲೂ ಹೊಂದಿಲ್ಲದಿರುವಾಗಲೂ ಸಂತೋಷವಾಗಿರಲು ಕಲಿತುಕೊಂಡಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ.
Kannada BSI Bible 2016
ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ, ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದದೆ.
Kannada Bible (KNCL) BSI 2016
ಬಡತನ ಇರಲಿ, ಸಿರಿತನವಿರಲಿ, ಕೊರತೆಯಿರಲಿ, ಸಮೃದ್ಧಿ ಇರಲಿ, ಹಸಿದಿರಲಿ, ಹೊಟ್ಟೆ ತುಂಬಿರಲಿ - ಯಾವ ಸ್ಥಿತಿಯಲ್ಲಿದ್ದರೂ, ಎಲ್ಲಾ ವೇಳೆಯಲ್ಲಿಯೂ ತೃಪ್ತನಾಗಿರುವ ರಹಸ್ಯವನ್ನು ತಿಳಿದಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊರತೆಯಲ್ಲಾಗಲಿ, ಸಮೃದ್ಧಿಯಲ್ಲಾಗಲಿ ಹೇಗೆ ಜೀವಿಸಬೇಕೆಂಬ ಅನುಭವವನ್ನು ತಿಳಿದುಕೊಂಡಿದ್ದೇನೆ. ಚೆನ್ನಾಗಿ ಊಟಮಾಡಿರಲಿ, ಹಸಿವೆಯಿಂದಿರಲಿ, ಸಮೃದ್ಧಿಯುಳ್ಳವನಾಗಿರಲಿ, ಕೊರತೆಯುಳ್ಳವನಾಗಿರಲಿ, ಯಾವುದೇ ಪರಿಸ್ಥಿತಿಯಲ್ಲಿದ್ದರೂ ಎಲ್ಲಾ ಪರಿಸ್ಥಿತಿಗಳಲ್ಲಿ ತೃಪ್ತನಾಗಿರುವ ರಹಸ್ಯವನ್ನು ಕಲಿತುಕೊಂಡಿದ್ದೇನೆ.