Philippians 4:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ ಫಿಲಿಪ್ಪಿ ಪಟ್ಟಣದವರೇ, ನಾನು ಮೊದಲು ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ ಮಕೆದೋನಿಯಕ್ಕೆ ಹೊರಟಾಗ, ನಿಮ್ಮ ಸಭೆಯೊಂದೇ ನನಗೆ ಸಹಾಯ ಮಾಡಿದ್ದು ನಿಮಗೆ ಗೊತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಪ್ಪಿಯವರೇ, ನಾನು ಪ್ರಾರಂಭದಲ್ಲಿ ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ, ಮಕೆದೋನ್ಯದಿಂದ ಹೊರಟುಹೋದಾಗ ಕೊಡುವ, ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಯೂ ನನಗೆ ಬೆಂಬಲಿಸಲ್ಲಿಲ್ಲವೆಂಬುದನ್ನು ನೀವೂ ಬಲ್ಲಿರಿ.
Kannada BSI Bible 2016
ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಫಿಲಿಪ್ಪಿಯವರೇ, ನಾನು ಮೊದಲು ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ ಮಕೆದೋನ್ಯದಿಂದ ಹೊರಟು ಹೋದಾಗ ಕೊಡುವ ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಗೂ ನನಗೂ ಸಂಬಂಧವಿರಲಿಲ್ಲವೆಂದು ನೀವೂ ಬಲ್ಲಿರಿ.
Kannada Bible (KNCL) BSI 2016
ಫಿಲಿಪ್ಪಿಯ ಸಹೋದರರೇ, ನಾನು ಶುಭಸಂದೇಶವನ್ನು ಸಾರಲು ಹೊರಟ ಪ್ರಾರಂಭದ ದಿನಗಳಲ್ಲಿ ಮಕೆದೋನಿಯವನ್ನು ಬಿಟ್ಟುಹೋದಾಗ ನೀವಲ್ಲದೆ ಬೇರೆ ಯಾವ ಸಭೆಯೂ ನನ್ನ ಆಯ-ವ್ಯಯಗಳಲ್ಲಿ ನೆರವಾಗಿರಲಿಲ್ಲ. ಇದು ನಿಮಗೆ ತಿಳಿದ ವಿಷಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಿಲಿಪ್ಪಿಯವರೇ, ನಾನು ಪ್ರಾರಂಭ ದಿನಗಳಲ್ಲಿ ನಿಮ್ಮ ನಡುವೆ ಸುವಾರ್ತೆ ಸಾರಿ ಮಕೆದೋನ್ಯದಿಂದ ಹೊರಟುಹೋದಾಗ, ನಿಮ್ಮನ್ನು ಬಿಟ್ಟು ಬೇರಾವ ಸಭೆಯವರು ಕೊಡುವ ಮತ್ತು ತೆಗೆದುಕೊಳ್ಳುವ ವಿಷಯದಲ್ಲಿ ಯಾರೂ ನನ್ನೊಂದಿಗೆ ಪಾಲುಗಾರರಾಗಲಿಲ್ಲ ಎಂಬುದನ್ನು ನೀವು ತಿಳಿದುಕೊಂಡಿದ್ದೀರಿ.