Philippians 4:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಜವಾಗಿಯೂ, ನಿಮ್ಮಿಂದ ಕೊಡುಗೆಗಳನ್ನು ಪಡೆದುಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಲ್ಲ. ಆದರೆ ಕೊಡುವುದರ ಮೂಲಕ ಮುಂದೆ ಹೇರಳವಾಗಿ ದೊರೆಯುವ ಆಶೀರ್ವಾದಗಳನ್ನು ನೀವು ಹೊಂದಿಕೊಳ್ಳಬೇಕೆಂಬುದೇ ನನ್ನ ಅಪೇಕ್ಷೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.
Kannada BSI Bible 2016
ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವದಿಲ್ಲ; ನಿಮ್ಮ ಆತ್ಮಕ್ಕೆ ಆದಾಯವಾಗುವಂಥ ಪ್ರೀತಿಫಲವನ್ನೇ ಅಪೇಕ್ಷಿಸುತ್ತೇನೆ. ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಯಾಯಿತು.
Kannada Bible (KNCL) BSI 2016
ನಿಮ್ಮಿಂದ ಸಹಾಯ ಪಡೆಯಬೇಕೆಂಬುದು ನನ್ನ ಉದ್ದೇಶವಲ್ಲ. ಆದರೆ ಈ ಸಹಾಯದಿಂದ ನಿಮಗೆ ಮುಂದೆ ದೊರಕುವ ಪ್ರತಿಫಲವು ಸಮೃದ್ಧಿಯಾಗಲೆಂದೇ ನನ್ನ ಇಚ್ಛೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮಿಂದ ದಾನವನ್ನು ನಿರೀಕ್ಷಿಸುವುದಿಲ್ಲ. ಆದರೆ ನಿಮ್ಮ ಲೆಕ್ಕಕ್ಕೆ ಲಾಭ ಹೆಚ್ಚಿಸುವುದನ್ನೇ ನೋಡುತ್ತಿದ್ದೇನೆ.