Philippians 4:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಪಫ್ರೊದೀತನು ನಿಮ್ಮ ಕೊಡುಗೆಯನ್ನು ತಂದು ಕೊಟ್ಟಿದ್ದರಿಂದ ಬೇಕಾದದ್ದೆಲ್ಲ ನನ್ನಲ್ಲಿ ಹೇರಳವಾಗಿದೆ. ನಿಮ್ಮ ಕೊಡುಗೆಯು ದೇವರಿಗೆ ಅರ್ಪಿಸಲ್ಪಟ್ಟ ಪರಿಮಳಭರಿತವಾದ ಯಜ್ಞವಾಗಿದೆ. ಇದು ದೇವರಿಗೆ ಮೆಚ್ಚಿಕೆಯಾದದ್ದೂ ಆಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.
Kannada BSI Bible 2016
ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
Kannada BSI JV (ಕನ್ನಡ ಸತ್ಯವೇದವು J.V. (BSI))
ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.
Kannada Bible (KNCL) BSI 2016
ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.