Philippians 4:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲಾ ದೇವಮಕ್ಕಳು ನಿಮಗೆ ವಂದನೆ ತಿಳಿಸಿದ್ದಾರೆ. ಸೀಸರನ ಅರಮನೆಯಲ್ಲಿರುವ ವಿಶ್ವಾಸಿಗಳೂ ಸಹ ನಿಮಗೆ ವಂದನೆ ತಿಳಿಸಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.
Kannada BSI Bible 2016
ಪರಿಶುದ್ದರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಮುಖ್ಯವಾಗಿ ಕೈಸರನ ಮನೆಯವರು ನಿಮ್ಮನ್ನು ವಂದಿಸುತ್ತಾರೆ;ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಲ್ಲಿರುವ ದೇವಜನರು ನಿಮ್ಮನ್ನು ವಂದಿಸುತ್ತಾರೆ. ಚಕ್ರವರ್ತಿಯ ಅರಮನೆಗೆ ಸೇರಿದವರು ವಿಶೇಷವಾದ ವಂದನೆಗಳನ್ನು ಹೇಳುತ್ತಾರೆ.
Kannada Bible (KNCL) BSI 2016
ಅಲ್ಲದೆ, ಇಲ್ಲಿರುವ ದೇವಜನರೆಲ್ಲರೂ ವಿಶೇಷವಾಗಿ ಚಕ್ರವರ್ತಿಯ ಅರಮನೆಯಲ್ಲಿರುವ ಕ್ರೈಸ್ತವಿಶ್ವಾಸಿಗಳು ತಮ್ಮ ಪ್ರಣಾಮಗಳನ್ನು ಸಲ್ಲಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲಾ ದೇವಜನರೂ ವಿಶೇಷವಾಗಿ ಕೈಸರನ ಮನೆತನಕ್ಕೆ ಸೇರಿದವರೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ.