Philippians 4:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.
Kannada BSI Bible 2016
ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ಯ ಸಯುಜನೇ, ಅವರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದವೆ.
Kannada Bible (KNCL) BSI 2016
ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.