Philippians 4:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾವುದರ ಬಗ್ಗೆಯೂ ಚಿಂತಿಸಬೇಡಿ. ಆದರೆ ಪ್ರಾರ್ಥನೆ ಮಾಡುತ್ತಾ ನಿಮ್ಮ ಅಗತ್ಯತೆಗಳಿಗೆಲ್ಲ ದೇವರಲ್ಲಿ ವಿಜ್ಞಾಪಿಸಿರಿ. ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.
Kannada BSI Bible 2016
ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ.
Kannada Bible (KNCL) BSI 2016
ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.