Philippians 4:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರ ಸಹೋದರಿಯರೇ, ಒಳ್ಳೆಯದಾದ ಮತ್ತು ಸ್ತುತಿಗೆ ಯೋಗ್ಯವಾದ ಸಂಗತಿಗಳ ಬಗ್ಗೆ ಆಲೋಚಿಸಿರಿ. ಸತ್ಯವಾದ, ಮಾನ್ಯವಾದ, ನ್ಯಾಯವಾದ, ಶುದ್ಧವಾದ, ಸುಂದರವಾದ ಮತ್ತು ಗೌರವಯುತವಾದ ವಿಷಯಗಳ ಬಗ್ಗೆ ಆಲೋಚಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.
Kannada BSI Bible 2016
ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
Kannada BSI JV (ಕನ್ನಡ ಸತ್ಯವೇದವು J.V. (BSI))
ಕಡೇ ಮಾತೇನಂದರೆ, ಸಹೋದರರೇ, ಯಾವಾವದು ಸತ್ಯವೂ ಮಾನ್ಯವೂ ನ್ಯಾಯವೂ ಶುದ್ಧವೂ ಪ್ರೀತಿಕರವೂ ಮನೋಹರವೂ ಆಗಿದೆಯೋ, ಯಾವದು ಸದ್ಗುಣವಾಗಿದೆಯೋ, ಯಾವದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳನ್ನೂ ಲಕ್ಷ್ಯಕ್ಕೆ ತಂದುಕೊಳ್ಳಿರಿ.
Kannada Bible (KNCL) BSI 2016
ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.