Proverbs 1:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರಾದರೋ ಬೇರೊಬ್ಬನನ್ನು ಕೊಲ್ಲಲು ಅವಿತುಕೊಂಡು ಕಾಯುತ್ತಾರೆ; ಆದರೆ ಅವರು ತಮ್ಮ ಸಂಚಿನಿಂದ ತಮ್ಮನ್ನೇ ನಾಶಪಡಿಸಿಕೊಳ್ಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ.
Kannada BSI Bible 2016
ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವದಕ್ಕೆ ಕಾದಿರುತ್ತಾರೆ.
Kannada Bible (KNCL) BSI 2016
ಇಂಥವರು ಹೊಂಚುಹಾಕುವುದು ಸ್ವಹತ್ಯಕ್ಕೇ, ಬಲೆ ಒಡ್ಡುವುದು ಸ್ವಂತ ಪ್ರಾಣನಾಶಕ್ಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಜನರು ಒಳಸಂಚು ಮಾಡುವುದು ತಮ್ಮ ಸ್ವಂತ ರಕ್ತಕ್ಕೆ. ಅವರು ಮಾಡುವ ದುರಾಲೋಚನೆ ಅವರನ್ನೇ ನಾಶಮಾಡುವುದು.