Proverbs 1:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ಮೂಢಜನರು. ಇನ್ನೆಷ್ಟುಕಾಲ ನೀವು ನಿಮ್ಮ ಮೂಢತನದಲ್ಲಿ ಆನಂದಿಸುವಿರಿ? ಇನ್ನೆಷ್ಟುಕಾಲ ನೀವು ವಿವೇಕವನ್ನು ಹಾಸ್ಯಮಾಡಬೇಕೆಂದಿದ್ದೀರಿ? ಇನ್ನೆಷ್ಟುಕಾಲ ನೀವು ಜ್ಞಾನವನ್ನು ದ್ವೇಷ ಮಾಡಬೇಕೆಂದಿದ್ದೀರಿ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?
Kannada BSI Bible 2016
ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವದಕ್ಕೆ ಎಷ್ಟು ಕಾಲ ಇಷ್ಟಪಡುವರು? ಜ್ಞಾನಹೀನರು ತಿಳುವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?
Kannada Bible (KNCL) BSI 2016
“ಮೂಢರೇ, ಎಂದಿನ ತನಕ ಮೂಢರಾಗಿರಲಾಶಿಸುವಿರಿ? ಕುಚೋದ್ಯಗಾರರೇ, ಎಷ್ಟುಕಾಲ ಕುಚೋದ್ಯಗಾರರಾಗಿರಲಿಚ್ಚಿಸುವಿರಿ? ಮೂರ್ಖರೇ, ಎಷ್ಟರವರೆಗೆ ತಿಳುವಳಿಕೆಯನ್ನು ಹಗೆಮಾಡುವಿರಿ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ?