Proverbs 1:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನಲ್ಲಿಟ್ಟಿರುವ ಭಯಭಕ್ತಿಯೇ ಜ್ಞಾನದ ಮೂಲ. ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ದ್ವೇಷಿಸುವರು. ಸೊಲೊಮೋನನು ತನ್ನ ಮಗನಿಗೆ ಮಾಡಿದ ಉಪದೇಶ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
Kannada BSI Bible 2016
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಭಯವೇ ತಿಳುವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆ ಮಾಡುವರು.
Kannada Bible (KNCL) BSI 2016
ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.