Proverbs 10:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಸ್ತನ್ನು ಸ್ವೀಕರಿಸಿಕೊಳ್ಳುವವನು ಜೀವಮಾರ್ಗವನ್ನು ತೋರಿಸುತ್ತಾನೆ. ತಿದ್ದುಪಡಿಯನ್ನು ಅಲಕ್ಷಿಸುವವನು ಇತರರನ್ನು ದಾರಿ ತಪ್ಪಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.
Kannada BSI Bible 2016
ಶಿಕ್ಷಣವನ್ನು ಕೈಕೊಳ್ಳುವವನು ಜೀವನದ ಮಾರ್ಗದಲ್ಲಿ ಇದ್ದಾನೆ; ಗದರಿಕೆಯನ್ನು ತಿರಸ್ಕರಿಸುವವನು ತಪ್ಪುಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು; ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.
Kannada Bible (KNCL) BSI 2016
ಶಿಸ್ತನ್ನು ಕೈಗೊಳ್ಳುವವನು ಜೀವಮಾರ್ಗದಲ್ಲಿರುವನು; ತಿದ್ದುಪಾಟನ್ನು ತಿರಸ್ಕರಿಸುವವನು ದಾರಿ ತಪ್ಪುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಸ್ತನ್ನು ಕೈಗೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು; ಆದರೆ ತಿದ್ದುಪಾಟನ್ನು ತಿರಸ್ಕರಿಸುವವನು ಇತರರ ದಾರಿತಪ್ಪಿಸುವನು.