Proverbs 10:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಡುಕನಿಗೆ ಅವನು ಭಯಪಡುವುದೇ ಸಂಭವಿಸುವುದು. ಒಳ್ಳೆಯವನಾದರೋ ತನಗೆ ಬೇಕಾದದ್ದನ್ನೆಲ್ಲ ಪಡೆದುಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವುದು, ಶಿಷ್ಟನಿಗೆ ಇಷ್ಟವು ಲಭಿಸುವುದು.
Kannada BSI Bible 2016
ದುಷ್ಟನ ಭಯವು ಅವನ ಮೇಲೆ ಬರುವದು; ನೀತಿವಂತರ ಇಷ್ಟವು ಸಫಲವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವದು; ಶಿಷ್ಟನಿಗೆ ಇಷ್ಟವು ಲಭಿಸುವದು.
Kannada Bible (KNCL) BSI 2016
ದುರ್ಜನರು ಭಯಪಡುವುದೇ ಸಂಭವಿಸುವುದು; ಸಜ್ಜನರು ಇಷ್ಟಪಡುವುದೇ ಲಭಿಸುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟನ ಭೀತಿಯೇ ಅವನನ್ನು ಹಿಂದಿಕ್ಕುವುದು; ಆದರೆ ನೀತಿವಂತರ ಇಷ್ಟವು ಸಫಲವಾಗುವುದು.