Proverbs 10:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀತಿವಂತರು ಹಸಿವೆಯಿಂದಿರಲು ಯೆಹೋವನು ಬಿಡುವುದಿಲ್ಲ. ದುಷ್ಟರ ಆಸೆಯನ್ನಾದರೋ ಆತನು ಭಂಗಪಡಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.
Kannada BSI Bible 2016
ನೀತಿವಂತನ ಪ್ರಾಣವನ್ನು ಕರ್ತನು ಹಸಿವೆಗೊಳಿಸನು; ದುಷ್ಟರ ಆಸ್ತಿಯನ್ನು ಆತನು ತಳ್ಳಿಹಾಕುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನೀತಿವಂತನನ್ನು ಹಸಿವೆಗೊಳಿಸನು; ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.
Kannada Bible (KNCL) BSI 2016
ಸತ್ಪುರುಷನನ್ನು ಸರ್ವೇಶ್ವರ ಹಸಿವೆಗೊಳಿಸನು; ದುಷ್ಟನ ಆಶೆಯನ್ನಾತ ಭಂಗಪಡಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀತಿವಂತನನ್ನು ಹಸಿವೆಯಿಂದ ಬಳಲುವಂತೆ ಯೆಹೋವ ದೇವರು ಬಿಡುವುದಿಲ್ಲ; ಆದರೆ ದುಷ್ಟರ ಆಶೆಯನ್ನು ಅವರು ಭಂಗಪಡಿಸುತ್ತಾರೆ.