Proverbs 10:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಳ್ಳೆಯವರು ಯಾವಾಗಲೂ ಕ್ಷೇಮವಾಗಿರುವರು. ಆದರೆ ಕೆಡುಕರನ್ನು ದೇಶದಿಂದ ಬಲವಂತವಾಗಿ ಹೊರಗಟ್ಟಲಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಷ್ಟರು ಎಂದಿಗೂ ಕದಲರು, ದುಷ್ಟರು ದೇಶದಲ್ಲಿ ನಿಲ್ಲರು.
Kannada BSI Bible 2016
ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಷ್ಟರು ಎಂದಿಗೂ ಕದಲರು; ದುಷ್ಟರು ದೇಶದಲ್ಲಿ ನಿಲ್ಲರು.
Kannada Bible (KNCL) BSI 2016
ಸಜ್ಜನರು ಎಂದಿಗೂ ಕದಲರು; ದುರ್ಜನರು ನಾಡಿನಲ್ಲಿ ನಿಲ್ಲರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀತಿವಂತರು ಎಂದಿಗೂ ಕದಲುವುದೇ ಇಲ್ಲ; ಆದರೆ ದುಷ್ಟರು ಭೂಮಿಯಲ್ಲಿ ನಿಲ್ಲುವುದಿಲ್ಲ.