Proverbs 10:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಳ್ಳೆಯವನು ಯೋಗ್ಯವಾದವುಗಳನ್ನು ಹೇಳುವನು. ಕೆಡುಕನು ಸುಳ್ಳನ್ನು ಮಾತ್ರ ಹೇಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಷ್ಟನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ.
Kannada BSI Bible 2016
ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಷ್ಟನ ತುಟಿಯಲ್ಲಿ ಉಚಿತವಚನ; ದುಷ್ಟನ ಬಾಯಲ್ಲಿ ನೀಚವಚನ.
Kannada Bible (KNCL) BSI 2016
ಸಜ್ಜನರ ಬಾಯಲ್ಲಿ ಹಿತವಚನ; ದುರ್ಜನರ ಬಾಯಲ್ಲಿ ನೀಚವಚನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಗ್ಯವಾದದ್ದು ಯಾವುದೆಂದು ನೀತಿವಂತರ ತುಟಿಗಳಿಗೆ ತಿಳಿಯುವುದು, ಆದರೆ, ದುಷ್ಟರ ಬಾಯಿ ಮೂರ್ಖತನವನ್ನೇ ಹೊರಗೆಡವುದು.