Proverbs 11:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜ್ಞಾನದ ಮಾರ್ಗದರ್ಶನವಿಲ್ಲದೆ ದೇಶವು ಬಿದ್ದು ಹೋಗುವುದು. ಆದರೆ ಒಳ್ಳೆಯ ಸಲಹೆಗಾರರನ್ನು ಹೊಂದಿರುವ ದೇಶವು ಕ್ಷೇಮವಾಗಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದು ಹೋಗುವುದು, ಬಹು ಮಂದಿ ಸಮಾಲೋಚಕರು ಇರುವಲ್ಲಿ ಸಂರಕ್ಷಣೆ ಇರುವುದು.
Kannada BSI Bible 2016
ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದುಹೋಗುವದು; ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವದು.
Kannada Bible (KNCL) BSI 2016
ನಾಯಕನಿಲ್ಲದ ಜನತೆ ನಾಶವಾಗುವುದು; ಹಲವರು ಸುಮಂತ್ರಿಗಳಿರುವಲ್ಲಿ ಸಂರಕ್ಷಣೆ ಇರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಲೋಚನೆ ಇಲ್ಲದೆ ಇರುವಲ್ಲಿ ಜನರು ಬೀಳುತ್ತಾರೆ, ಆದರೆ ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.