Proverbs 11:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೇರೊಬ್ಬನ ಸಾಲಕ್ಕೆ ನೀನು ಜಾಮೀನಾಗಿದ್ದರೆ ಕಷ್ಟಕ್ಕೀಡಾಗಿರುವೆ; ನೀನು ಜಾಮೀನಾಗಿಲ್ಲದಿದ್ದರೆ ಕ್ಷೇಮವಾಗಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನ್ಯನ ಸಾಲಕ್ಕೆ ಹೊಣೆಯಾದರೆ ಹಾನಿ, ಅಪರಿಚಿತನ ಹೊಣೆಗೆ ದೂರವಾದರೆ ನಿರ್ಭಯ.
Kannada BSI Bible 2016
ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ; ಹೊಣೆಗಾರತ್ವವನ್ನು ಹಗೆಮಾಡಿ ಕೊಳ್ಳುವವನು ಭದ್ರವಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆರರಿಗೆ ಹೊಣೆಯಾದರೆ ಹಾನಿ; ಹೊಣೆಗೆ ಅಸಹ್ಯಪಟ್ಟರೆ ನಿರ್ಭಯ.
Kannada Bible (KNCL) BSI 2016
ಅಪರಿಚಿತನಿಗೆ ಜಾಮೀನು ನಿಂತರೆ ಹಾನಿ; ಜಾಮೀನನ್ನು ತೊರೆದುಬಿಟ್ಟರೆ ನೆಮ್ಮದಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ, ಹೊಣೆಗಾರನಾಗಿರದವನು ಸುರಕ್ಷಿತವಾಗಿರುವನು.